ಎಂ.ಬಿ.ಪಾಟೀಲ್ ಬಿಜೆಪಿಗೆ ಬಂದರೆ ಡಿಸಿಎಂ ಹುದ್ದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್

ವಿಜಯಪುರ, ಮೇ 7-ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿಗೆ ಬಂದರೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಶ್ವಾಸನೆ ನೀಡಿದ್ದಾರೆ.

ವಿಜಯಪುರದಲ್ಲಿಂದು ಬಸವಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂ.ಬಿ.ಪಾಟೀಲ್ ನನ್ನನ್ನು ಕಾಂಗ್ರೆಸ್ಗೆ ಆಹ್ವಾನಿಸುತ್ತಿದ್ದಾರೆ, ನಾನಂತೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಎಂ.ಬಿ.ಪಾಟೀಲ್ ಅವರೇ ಬಿಜೆಪಿಗೆ ಬರಲಿ. ನನಗೆ ಬರಬೇಕಾದ ಅಧಿಕಾರವನ್ನು ಅವರಿಗೇ ಬಿಟ್ಟುಕೊಟ್ಟು ಖುಷಿ ಪಡುತ್ತೇನೆ. ನಾವು ಅವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿದರು.

ಅವರೇನೂ ಬಿಜೆಪಿಗೆ ಬರುವುದಿಲ್ಲ, ನಾವು ಕರೆತರುವ ಪ್ರಯತ್ನ ಮಾಡುವುದಿಲ್ಲ. ಒಂದು ವೇಳೆ ಬಂದರೆ ಸ್ವಾಗತಿಸುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ