ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಜೆಐಗೆ ಕ್ಲೀನ್ ಚಿಟ್: ಮಹಿಳಾ ವಕೀಲರ ಪ್ರತಿಭಟನೆ

ನವದೆಹಲಿ: ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್ ಅವರಣದಲ್ಲಿ ಮಾಜಿ ಸುಪ್ರೀಂ ಕೋರ್ಟ್ ಮಹಿಳಾ ವಕೀಲರ ನೇತೃತ್ವದಲ್ಲಿ ಮಹಿಳಾ ವಕೀಲರು ಪ್ರತಿಭಟನೆ ನಡೆಸುತ್ತಿದ್ದು, ತ್ರಿಸದಸ್ಯ ಪೀಠದ ತೀರ್ಪಿನ ಮೂಲಕ ಸರ್ವೋಚ್ಛ ನ್ಯಾಯಾಲಯದಲ್ಲಿ ಮಹಿಳೆಗೆ ನ್ಯಾಯ ದೊರೆಯುತ್ತದೆ ಎಂಬ ನಮ್ಮ ವಿಶ್ವಾಸ ಸುಳ್ಳಾಗಿದೆ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯಿಂದಾಗಿಸುಪ್ರೀಂ ಆವರಣದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನಲೆಯಲ್ಲಿ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದಾರೆ. ಅಂತೆಯೇ ಸ್ಥಳದಲ್ಲಿ ಸೆಕ್ಷನ್ 144 ಜಾರಿ ಮಾಡಿದ್ದಾರೆ.

ನಿನ್ನೆಯಷ್ಚೇ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದತೆ ಸುಪ್ರೀಂ ಕೋರ್ಟ್ ಆಂತರಿಕ ವಿಚಾರಣಾ ಸಮಿತಿ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ರಿಸದಸ್ಯ ಪೀಠ ರದ್ದುಗೊಳಿಸಿತ್ತು.

Women protest against clean chit to CJI Ranjan Gogoi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ