
ಬೆಂಗಳೂರು, ಮೇ 8- ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಮೇ 10ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅಂದು ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ರಾಜ್ಯಪಾಲ ವಜುಬಾಯಿ ವಾಲಾ ಅವರು ನ್ಯಾಯಮೂರ್ತಿಗಳಿಗೆ ಅಧಿಕಾರದ ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ಭಾಸ್ಕರ್, ಹೈಕೋರ್ಟ್ನ ನ್ಯಾಯಾಧೀಶರು ಸೇರಿದಂತೆ ಹಲವು ಗಣ್ಯರು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.