ಬೆಂಗಳೂರು, ಮೇ 8- ಬಸನಗೌಡ ಪಾಟೀಲ್ ಯತ್ನಾಳ್ ನಾನೂ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಎನ್ನುತ್ತಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇಲ್ಲ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಆದರೂ ತುಂಬಾ ಜನ ನಾವೂ ಆಕಾಂಕ್ಷಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಅಧ್ಯಕ್ಷ ಸ್ಥಾನ ಖಾಲಿಯಾದ ಮೇಲೆ ನೋಡೋಣ. ಪಕ್ಷದ ಹೈಕಮಾಂಡ್ ಯಾರಿಗೆ ಅಧ್ಯಕ್ಷ ಪಟ್ಟ ಕಟ್ಟುತ್ತದೆ ಅವರು ಅಧ್ಯಕ್ಷರಾಗುತ್ತಾರೆ ಎಂದು ಹೇಳಿದರು.
ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಬೇಕೆಂಬ ಕನಸು ಕಾಣುತ್ತಿದ್ದಾರೆ. ಅವರೇಕೆ ಬಿಜೆಪಿಗೆ ಬರುತ್ತಾರೆ ಎಂದು ಎಂ.ಬಿ.ಪಾಟೀಲ್ ಅವರನ್ನು ಬಿಜೆಪಿಗೆ ಆಹ್ವಾನಿಸಿರುವ ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.