ಬಿಬಿಎಂಪಿ ಅಯವ್ಯಯ-ಸಚಿವ ಸಂಪುಟ ಸಭೆ ಅನುಮೋದನೆ ನೀಡುವ ಸಾಧ್ಯತೆ

ಬೆಂಗಳೂರು, ಮೇ 9- ಬಿಬಿಎಂಪಿ ಆಯವ್ಯಯಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವ ಸಾಧ್ಯತೆಗಳಿವೆ.

ಬಿಬಿಎಂಪಿ ಪ್ರಸಕ್ತ ಸಾಲಿನಲ್ಲಿ 13 ಸಾವಿರ ಕೋಟಿ ಬಜೆಟ್ ಮಂಡಿಸಿದ್ದು, ಅದನ್ನು ಕಡಿತಗೊಳಿಸಿ 9824 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಿ ಪಾಲಿಕೆ ಬಜೆಟ್‍ಗೆ ಅನುಮೋದನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ