ಮಡಿಕೇರಿ ಸಂತ್ರಸ್ತರಿಗಾಗಿ ಸಾರಿಗೆ ಸಂಸ್ಥೆಗಳಿಂದ ಸಂಗ್ರಹಿಸಲಾಗಿದ್ದ ಹಣದ ಚೆಕ್-ಸಿ.ಎಂ. ಅವರಿಗೆ ಹಸ್ತಾಂತರ

ಬೆಂಗಳೂರು, ಮೇ 9-ಮಡಿಕೇರಿ ಅತಿವೃಷ್ಠಿ ಸಂತ್ರಸ್ತರಿಗಾಗಿ ಕೆಎಸ್‍ಆರ್‍ಟಿಸಿ ಸೇರಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳಿಂದ ಸಂಗ್ರಹಿಸಲಾಗಿದ್ದ 9.17 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಲಾಯಿತು.

ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಒಂದು ದಿನದ ವೇತನವನ್ನು ಕೊಡಗು ಜಿಲ್ಲೆ ಸಂತ್ರಸ್ತರಿಗೆ ನೀಡಿದ್ದರು.

ಆ ಹಣದ ಚೆಕ್ ಅನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಲಾಯಿತು.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕರಾದ ಶಿವಲಿಂಗೇಗೌಡ, ಸತ್ಯನಾರಾಯಣ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್, ಕೆಎಸ್‍ಆರ್‍ಟಿಸಿ ಹಿರಿಯ ಅಧಿಕಾರಿಗಳಾದ ಬಸವರಾಜು, ಎನ್.ವಿ.ಪ್ರಸಾದ್ ಉಪಸ್ಥಿತರಿದ್ದರು.

ಇದೇ ವೇಳೆ ಕೆಎಸ್‍ಆರ್‍ಟಿಸಿಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ 17.81 ಲಕ್ಷ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ