ಶ್ರೀರಾಮುಲು ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಕಾಂಗ್ರೇಸ್

ಕುಂದಗೋಳ, ಮೇ 9- ಸಚಿವ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಶ್ರೀರಾಮುಲು ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ.

ನಿನ್ನೆ ಸುದ್ದಿಗೋಷ್ಠಿಯಲ್ಲಿ ಶ್ರೀರಾಮುಲು, ಸರ್ಕಾರದ ಕಿರುಕುಳದಿಂದ ಶಿವಳ್ಳಿ ಅವರ ಸಾವಾಗಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಜನಪ್ರತಿನಿಧಿಗಳ ಕಾಯ್ದೆಗೆ ವಿರುದ್ಧವಾಗಿದೆ ಮತ್ತು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಕಾಂಗ್ರೆಸ್ ಮುಂದಾಗಿದೆ.

ಕುಂದಗೋಳ ಚುನಾವಣೆ ಉಸ್ತುವಾರಿ ಹೊಣೆ ಹೊತ್ತಿರುವ ಡಿ.ಕೆ.ಶಿವಕುಮಾರ್ ಅವರು ರಾತ್ರೋರಾತ್ರಿ ಸಂಸದ ಉಗ್ರಪ್ಪ ಅವರನ್ನು ಕರೆಸಿಕೊಂಡು ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಶ್ರೀರಾಮುಲು ವಿರುದ್ಧ ಇಂದು ಕುಂದಗೋಳ ಚುನಾವಣಾಧಿಕಾರಿಗೆ ದೂರು ನೀಡಲಿದ್ದಾರೆ. ಒಬ್ಬ ವ್ಯಕ್ತಿಯ ಸಾವಿಗೆ ಸರ್ಕಾರ ಕಾರಣವಾಗಿದೆ ಎಂದು ಬಿಜೆಪಿ ಮುಖಂಡರು ಹೇಳಿರುವ ವಿಷಯ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿದೆ. ಕಾಂಗ್ರೆಸ್ ಮುಖಂಡರು ರಾಮುಲು ವಿರುದ್ಧ ದೂರು ನೀಡಲು ಮುಂದಾಗಿದ್ದು, ಚುನಾವಣಾ ಆಯೊಗ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

ಕಾಂಗ್ರೆಸ್ ಇದೇ ವಿಷಯವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳಲು ನಿರ್ಧರಿಸಿದೆ. ಬಿಜೆಪಿ ಇದಕ್ಕೆ ಪ್ರತಿತಂತ್ರ ರೂಪಿಸುತ್ತಿದೆ. ಶ್ರೀರಾಮುಲು ಅವರ ಈ ಹೇಳಿಕೆಗೆ ಅವರ ಪಕ್ಷದಲ್ಲೇ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ