ಮತ್ತೆ ಪ್ರಕೃತಿ ಚಕಿತ್ಸೆ ಪಡೆಯುತ್ತಿರುವ ಮಾಜಿ ಪಿಎಂ ದೇವೇಗೌಡರು

ಬೆಂಗಳೂರು, ಮೇ 9-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಉಡುಪಿ ಬಳಿಯ ಕಾಪುವಿನಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ ಮತ್ತೆ ಪ್ರಕೃತಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ಅವರೊಂದಿಗೆ ಪ್ರಕೃತಿ ಚಿಕಿತ್ಸೆ ಪಡೆಯಲು ತೆರಳಿದ್ದಾರೆ.ಚನ್ನಮ್ಮ ಅವರೂ ಕೂಡ ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸುಮಾರು ಒಂದು ವಾರ ಕಾಲ ಪ್ರಕೃತಿ ಚಿಕಿತ್ಸೆಯನ್ನು ಗೌಡರು ಪಡೆದುಕೊಂಡಿದ್ದರು.

ಮತ್ತೆ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಗೌಡರು ಮೇ 16 ರವರೆಗೂ ಚಿಕಿತ್ಸಾಲಯದಲ್ಲೇ ವಿಶ್ರಾಂತಿ ಪಡೆದು ಅಂದು ಸಂಜೆ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ