ಶ್ರೀಲಂಕಾ ಸರಣಿ ಸ್ಪೋಟದ ಹಿನ್ನಲೆ-ರಾಜ್ಯದಲ್ಲಿ ಕಟ್ಟೆಚ್ಚರ

ಬೆಂಗಳೂರು, ಮೇ 9-ಶ್ರೀಲಂಕಾ ಸರಣಿ ಸ್ಫೋಟದ ನಂತರ ರಾಜ್ಯದಲ್ಲಿ ಭದ್ರತೆ ವಿಷಯವಾಗಿ ರಾಜ್ಯ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರತಿಯೊಬ್ಬರನ್ನು ತಪಾಸಣೆಗೊಳಪಡಿಸುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮೆಟ್ರೋ ನಿಲ್ದಾಣದಲ್ಲಿ ಶಂಕಾಸ್ಪದ ವ್ಯಕ್ತಿಯೊಬ್ಬ ಕಂಡುಬಂದಿದ್ದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಚಿವರನ್ನು, ಮಾಧ್ಯಮದವರನ್ನೂ ಸೇರಿದಂತೆ ಎಲ್ಲರನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ. ಒಂದು ಸಣ್ಣ ನಿರ್ಲಕ್ಷ್ಯ ದೊಡ್ಡ ಅಪಾಯಕ್ಕೆ ಅವಕಾಶ ನೀಡಬಹುದು. ಹಾಗಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ತಪಾಸಣೆಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಭದ್ರತೆ ವಿಷಯದಲ್ಲಿ ಜಾತಿ, ಧರ್ಮದ ಭೇದಭಾವವಿಲ್ಲ. ನಮ್ಮ ಮೊದಲ ಆದ್ಯತೆ ಸುರಕ್ಷತೆ. ಹಾಗಾಗಿ ಯಾವ ಸಂದರ್ಭದಲ್ಲೂ ತಪಾಸಣೆ ನಡೆದರೂ ಸಾರ್ವಜನಿಕರು ಪೊಲೀಸರ ಜೊತೆ ಸಹಕರಿಸಬೇಕೆಂದು ಕರೆ ನೀಡಿದರು.

ಮುಖ್ಯಮಂತ್ರಿ ಹುದ್ದೆ ಬಗ್ಗೆ ಈಗಾಗಲೇ ನನ್ನ ಅಭಿಪ್ರಾಯವನ್ನು ಹೇಳಿದ್ದಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ