ಪ್ರಧಾನಿ ನರೇಂದ್ರ ಮೋದಿ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ-ಕಾಂಗ್ರೇಸ್ ಮುಖಂಡ ಅಹಮ್ಮದ್ ಪಟೇಲ್

ನವದೆಹಲಿ, ಮೇ 9- ಹುತಾತ್ಮರಾದ ರಾಜೀವ್‍ಗಾಂಧಿ ಅವರ ಬಗ್ಗೆ ಕೀಳುಮಟ್ಟದ ಪದ ಬಳಕೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಹಮ್ಮದ್ ಪಟೇಲ್ ಟೀಕಿಸಿದ್ದಾರೆ.

ಗಾಂಧಿ ಕುಟುಂಬದ ವಿರುದ್ಧ ಪ್ರಧಾನಿ ಅವರು ಹೇಡಿತನದ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ದಿಕ್ಕುತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸುಳ್ಳುಗಳನ್ನು ಹೇಳುವ ಮೂಲಕ ಹುತಾತ್ಮರ ಬಗ್ಗೆ ಕೀಳು ಭಾವನೆ ಮೂಡಿಸುತ್ತಿದ್ದಾರೆ ಎಂದು ಟ್ಟಿಟರ್‍ನಲ್ಲಿ ಅಹಮ್ಮದ್ ಪಟೇಲ್ ಕಿಡಿಕಾರಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ