ದೆಹಲಿ,ಮೇ.09-ತೇಜ್ ಬಹದ್ದೂರ್ ಯಾದವ್ ವಾರಣಾಸಿ ಕ್ಷೇತ್ರದಿಂದ ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು. ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಅವರು ಸಲ್ಲಿಸಿದ್ದ ಮನವಿಯನ್ನು ಇಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿತು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು, ಯಾದವ್ ಅವರು ಸಲ್ಲಿಸಿರುವ ಮನವಿಯಲ್ಲಿ ಯಾವುದೇ ಆಧಾರವಿಲ್ಲ ಎಂದು ಹೇಳಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಪರ್ಧಿಸಿರುವ ವಾರಣಾಸಿ ಕ್ಷೇತ್ರದಿಂದ ಯಾದವ್ ಅವರು ಸಮಾಜವಾದಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದರು. ಯಾದವ್ ಅವರನ್ನು ಸೇನೆಯಿಂದ 2017 ರಲ್ಲಿ ವಜಾ ಮಾಡಲಾಗಿತ್ತು.