ನವದೆಹಲಿ,ಮೇ 9- ತಮ್ಮನ್ನು ಸ್ಪರ್ಧಾ ಕಣದಿಂದ ಅನರ್ಹಗೊಂಡಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹುದ್ದೂರ್ ಯಾದವ್ ಅವರ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ತೇಜ್ಬಹುದ್ದೂರ್ ಯಾದವ್ ಅವರ ಅರ್ಜಿಯನ್ನು ಕೆಲವೇ ನಿಮಿಷಗಳಲ್ಲಿ ವಜಾಗೊಳಿಸಿ ಚುನಾವಣಾ ಆಯೋಗದ ಕ್ರಮವನ್ನು ಎತ್ತಿ ಹಿಡಿದರು.
ದುರ್ನಡತೆ ಆಧಾರದ ಮೇಲೆ ತೇಜ್ ಬಹದ್ದೂರ್ ಯಾದವ್ ಅವರನ್ನು ಕೇಂದ್ರ ರಕ್ಷಣಾ ಇಲಾಖೆ ಸೇವೆಯಿಂದ ವಜಾಗೊಳಿಸಿತ್ತು. ಅವರ ಮೇಲಿರುವ ತನಿಖಾ ಕ್ರಮ ಇನ್ನು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.
ರಕ್ಷಣಾ ಇಲಾಖೆಯ ಸೂಚನೆ ಮೇರೆಗೆ ಯಾದವ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು.ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಬಿಎಸ್ಎಫ್ ಯೋಧರಾಗಿದ್ದ ಬಹದ್ದೂರ್ ಸೇನೆಯಲ್ಲಿ ಸೈನಿಕರಿಗೆ ಕಳಪೆ ಆಹಾರ ನೀಡಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯಾವಳಿಯನ್ನು ಹರಿಬಿಟ್ಟಿದ್ದನು.
ಇದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.