ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಡಿಸಿಎಂ ಡಾ.ಜಿ.ಪರಮೇಶ್ವರ್

ತುಮಕೂರು, ಮೇ 10- ಬರಪರಿಸ್ಥಿತಿ ಎದುರಿಸಲು ಮಾರ್ಚ್‍ನಲ್ಲೇ ಸನ್ನದ್ಧರಾಗುವಂತೆ ಸೂಚನೆ ನೀಡಿದ್ದರು ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಗಳನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.

ಬರಪರಿಹಾರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬರಗಾಲದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತಂತೆ ಸೂಚನೆ ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ, ಏನು ಮಾಡುತ್ತಿದ್ದೀರಿ..? ಜನಪ್ರತಿನಿಧಿಗಳು ಹಾಗೂ ಜನರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ. ನಮಗೆ ಜನರು ಮುಖ್ಯ.ಅಧಿಕಾರ ಮುಖ್ಯವಲ್ಲ ಎಂದು ಗುಡುಗಿದರು.

ಬರಪರಿಸ್ಥಿತಿ ಕುರಿತಂತೆ ಕೆಲ ಇಲಾಖೆ ಅಧಿಕಾರಿಗಳು ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಅಂತಹ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ