ಚುನಾವಣಾಧಿಕಾರಿಯಿಂದ ಆನೇಕಲ್ ಪುರಸಭೆ ಮತ್ತು ಹೆಬ್ಬಗೋಡಿ ನಗರಸಭೆಗೆ ಅಧಿಸೂಚನೆ

ಬೆಂಗಳೂರು, ಮೇ 10- ಆನೇಕಲ್ ಪುರಸಭೆಯ 27 ವಾರ್ಡ್‍ಗಳಿಗೆ ಹಾಗೂ ಹೆಬ್ಬಗೋಡಿ ನಗರಸಭೆಯ ವಾರ್ಡ್ ಸಂಖ್ಯೆ 26ಕ್ಕೆ ಚುನಾವಣೆ ಅಧಿಸೂಚನೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಎಂ.ವಿಜಯ್‍ಶಂಕರ್ ಹೊರಡಿಸಿದ್ದಾರೆ.

ಮೇ 9ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಅವಕಾಶ ಕಲ್ಪಿಸಲಾಗಿದೆ. ಮೇ 16ರ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮೇ 27ರಂದು ಆನೇಕಲ್ ಪುರಸಭೆಯ ವಾರ್ಡ್‍ಗಳಿಗೆ ಹಾಗೂ ಹೆಬ್ಬಗೋಡಿ ನಗರಸಭೆ ವಾರ್ಡ್ ಸಂಖ್ಯೆ 26ಕ್ಕೆ ಅಭ್ಯರ್ಥಿಗಳು ಸಲ್ಲಿಸುವ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20ರ ವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶ ನೀಡಲಾಗಿದೆ.

ಅಗತ್ಯವಿದ್ದರೆ ಮೇ 29ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಸಲಾಗುತ್ತದೆ.ಮೇ 31ರಂದು ಬೆಳಗ್ಗೆ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ್‍ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ