ಕುಂದಗೋಳ,ಮೇ 11- ಕುಂದಗೋಳ ಉಪಚುನಾವಣೆಯನ್ನು ಶತಾಯಗತಾಯ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಮಠಾಧೀಶರ ಮೊರೆ ಹೋಗಿದ್ದಾರೆ.
ಕಳೆದ ವಾರವಷ್ಟೇ ಈ ಭಾಗದ ಹಲವು ಮಠಾಧೀಶರ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದ ಬಿಎಸ್ವೈ ಇಂದು ರಂಭಾಪುರಿ ಕಲ್ಯಾಣ ಮಂಟಪಕ್ಕೆ ಆಗಮಿಸಿ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು.
ಹುಬ್ಬಳ್ಳಿಯಲ್ಲೇ ವಾಸ್ತವ್ಯ ಮಾಡಿರುವ ಬಿಎಸ್ವೈ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಪೂಜಾ ಕೈಂಕರ್ಯದಲ್ಲಿ ತೊಡಗಿರುವ ಶ್ರೀಗಳ ಬಳಿ ತೆರಳಿ ಆಶೀರ್ವಾದ ಪಡೆದರು.
ಕಳೆದ ವಾರವಷ್ಟೇ ಈ ಭಾಗದ ಹಲವು ಮಠಾಧೀಶರ ಭೇಟಿ ಮಾಡಿ ಆಶೀರ್ವಾದ ಪಡೆಯುವ ಮೂಲಕ ಲಿಂಗಾಯತ ಹಾಗೂ ವೀರಶೈವ ಸಮುದಾಯದ ಮತಗಳನ್ನು ಸೆಳೆಯಲು ಮುಂದಾಗಿದ್ದರು.