ಸಿಲಿಂಡರ್ ಸ್ಪೋಟದ ರಬಸಕ್ಕೆ ಹಾರಿಹೋದ ಮನೆಯ ಮೇಲ್ಛಾವಣಿ

ಕೊಪ್ಪಳ, ಮೇ 11- ಚಹಾ ಮಾಡುವ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಗೆ ಹಾನಿಯಾಗಿದ್ದು, ಮಹಿಳೆಯೋರ್ವಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ರಾಯರೆಡ್ಡಿ ಕಾಲೋನಿಯಲ್ಲಿ ನಡೆದಿದೆ.

ರಾಜಮ್ಮ ಷಯದಸಾಬ್ ಗಾಯಗೊಂಡ ಮಹಿಳೆಯಾಗಿದ್ದಾರೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.ಅಲ್ಲದೆ ಮನೆಯ ಸಾಮಾನುಗಳು ಸುಟ್ಟು ಕರಕಲಾಗಿವೆ.

ರಾಜಮ್ಮ ಚಹಾ ಮಾಡುತ್ತಿದ್ದ ವೇಳೆಯಲ್ಲಿ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರಾಜಮ್ಮ ಹೊರಗಡೆ ಬಂದಿದ್ದಾರೆ. ರಾಜಮ್ಮ ಹೊರಬರುತ್ತಲೇ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ರಾಜಮ್ಮ ಗಾಯಗೊಂಡಿದ್ದಾರೆ.

ಗಾಯಾಳು ರಾಜಮ್ಮರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ