ಕಾಂಗ್ರೇಸ್ಸಿಗೆ ತಾಕತ್ತಿದ್ದರೆ ಸಿದ್ದರಾಮಯ್ಯ ಅವರನ್ನು ವಜಾ ಮಾಡಲಿ-ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಮೇ 11-ಕಾಂಗ್ರೆಸ್ ಹೈಕಮಾಂಡ್‍ಗೆ ತಾಕತ್ತಿದ್ದರೆ ನಾನೇ ಮುಂದಿನ ಸಿಎಂ ಎಂದು ಹೇಳಿಕೆ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ದಿನೇಶ್‍ಗುಂಡೂರಾವ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರುಗಳು ಬಟ್ಟೆಯ ಹಾವಿದ್ದಂತೆ. ಅವರ ಮಾತನ್ನು ಯಾರೂ ಕೇಳುತ್ತಿಲ್ಲ. ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗದಿರುವವರು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ದೂರುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಮೂರ್ನಾಲ್ಕು ಮಂದಿ ಬೆಂಬಲಿಗರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿ ಎನ್ನುತ್ತಿದ್ದಾರೆ. ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಅವರು ತಾವೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು ಎಂದು ಹೇಳುತ್ತಿದ್ದಾರೆ. ಇವರ್ಯಾರಿಗೂ ನೋಟೀಸ್ ನೀಡಿ ವಿಚಾರಣೆ ಮಾಡುವ ಶಕ್ತಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್‍ಗಿಲ್ಲ. ಕಾಂಗ್ರೆಸ್ ಹೈಕಮಾಂಡ್‍ಗೆ ತಾಕತ್ತಿದ್ದರೆ ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಉಚ್ಚಾಟನೆ ಮಾಡಲಿ ಎಂದು ಸವಾಲು ಹಾಕಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ