ಶೋಪಿಯಾನ್: ಜಮ್ಮು -ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಯೋಧರು ಸದೆಬಡಿದಿದ್ದಾರೆ.
ದಕ್ಷಿಣ ಕಾಶ್ಮೀರದ ಶೊಪಿಯಾನ್ ಜಿಲ್ಲೆಯ ಹಿಂಡ್ಸಿತಾಪುರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಸೇನಾಪಡೆ ನಡೆಸಿದ ದಾಳಿಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಉಗ್ರರಿಂದ ಶಾಸ್ತ್ರಾಸ್ತ್ರಗಳು ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
2 Terrorists Shot Dead In Encounter In Jammu And Kashmir’s Shopian