ಬೆಂಗಳೂರು, ಮೇ 13- ರಾಜ್ಯ ದೋಸ್ತಿ ಸರ್ಕಾರದ ನಾಯಕರ ನಡುವೇ ಮಾತಿನ ಸಮರಕ್ಕೆ ಕಾರಣವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರ ಹೇಳಿಕೆ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರು ಇಂದು ಬೆಂಗಳೂರಿಗೆ ಆಗಮಿಸಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ.
ನಗರದ ಪದ್ಮನಾಭ ನಗರದಲ್ಲಿ ಇರುವ ಎಚ್ಡಿಡಿ ನಿವಾಸಕ್ಕೆ ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾತುಕತೆ ನಡೆಸಿದರು. ಮಡಿಕೇರಿಯ ರೆಸಾರ್ಟ್ ನಲ್ಲಿ ವಿಶ್ರಾಂತಿ ಮುಗಿಸಿ ಬಳಿಕ ನೇರವಾಗಿ ಸಿಎಂ ತಂದೆಯವರ ನಿವಾಸಕ್ಕೆ ಭೇಟಿ ನೀಡಿದ್ದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ತಮ್ಮ ಭೇಟಿ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸುವ ಜೊತೆಗೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.