ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ ದಲಿತ ಸಂಘರ್ಷ ಸಮಿತಿ

ಬೆಂಗಳೂರು,ಮೇ 14- ರಾಜ್ಯ ಸರ್ಕಾರ ರೂಪಿಸಿದ್ದ ಎಸ್ಟಿ-ಎಸ್ಟಿ ಮುಂಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸುಪ್ರೀಂಕೋರ್ಟ್ ಸಮ್ಮತಿಸಿರುವುದನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮಿ ನಾರಾಯಣ ನಾಗವಾರ ತಿಳಿಸಿದ್ದಾರೆ.

ಎಸ್ಸಿ-ಎಸ್ಟಿ ಬಡ್ತಿ ಮೀಸಲಾತಿ ಕೆಲವರು ಪ್ರಶ್ನಿಸಿ ಸಲ್ಲಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ, ದಲಿತರ ನೌಕರರ ಬಡ್ತಿ ಮೀಸಲಾತಿ ಅನುಸರಿಸುವುದು ಅರ್ಹತೆಯ ತತ್ವಕ್ಕೆ ವಿರೋಧವಲ್ಲ. ಇದರಿಂದ ಆಡಳಿತ ದಕ್ಷತೆಯ ಮೇಲೂ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಹೇಳಿ ರಾಜ್ಯ ಸರ್ಕಾರ ರೂಪಿಸಿದ್ದ ಎಸ್ಸಿಎಸಿ ಕಾಯ್ದೆಯನ್ನು ಎತ್ತಿ ಹಿಡಿದಿರುವುದಕ್ಕೆ ದಲಿತ ಸಂಘರ್ಷ ಸ್ವಾಗತಿಸುತ್ತದೆ ಎಂದಿದ್ದಾರೆ.

ಸುಪ್ರೀಂಕೋರ್ಟ್‍ನ ಈ ತೀರ್ಪಿನಿಂದ ಹಿಂಬಡ್ತಿ ಹೊಂದಿದ್ದ ಸಾವಿರಾರು ದಲಿತ ನೌಕರರಿಗೆ ಸಾಮಾಜಿಕ ದೊರೆತಂತಾಗಿದೆ. ಯಾವುದೇ ನೆಪ ಹೇಳದೆ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಸಮಿತಿ ಒತ್ತಾಯಿಸಿದೆ.

ಈ ಹೋರಾಟ ಯಶಸ್ವಿಯಾಗಲು ಶ್ರಮಿಸಿದ ಎಲ್ಲಾ ಸಂಘಟನೆಗಳ ನಾಯಕರ, ಕಾರ್ಯಕರ್ತರು, ಈ ಬಗ್ಗೆ ಜಾಗೃತಿ ಮೂಡಿಸಿದ ಮಾದ್ಯಮದವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ನಾಗವಾರ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ