ಬೆಂಗಳೂರು, ಮೇ 15-ಕುಡಿಯುವ ನೀರು ಸೇರಿದಂತೆ ಬರ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವು ಬ್ಯಾಂಕ್, ಗೋಶಾಲೆ, ಗುಳೇ ಹೋಗದಂತೆ ತಡೆಯಲು ಉದ್ಯೋಗ ಸೃಷ್ಟಿ ಮೊದಲಾದ ವಿಚಾರಗಳ ಕುರಿತಂತೆ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಅಧಿಕಾರಿಗಳು ನಿರ್ದೇಶನ ನೀಡಿದರು.
ವಿಧಾನಸಭೆ ಉಪಚುನಾವಣೆ ನಡೆಯಲಿರುವ ಧಾರವಾಡ, ಕಲಬುರಗಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಕಂದಾಯ, ಆರ್ಥಿಕ, ಕೃಷಿ,ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡಿದ್ದರು.
ಸಚಿವರಾದ ಆರ್.ವಿ.ದೇಶಪಾಂಡೆ, ಕೃಷ್ಣಬೈರೇಗೌಡ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.