ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ

ಲಕ್ನೋ, ಮೇ 15- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀಕ್ಷ್ಣ ವಾಗ್ದಾಳಿ ಮುಂದುವರೆಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮೋದಿ ಗುಜರಾತ್ ಸಿಎಂ ಆಗಿದ್ದು, ಆ ರಾಜ್ಯಕ್ಕೆ ಮತ್ತು ದೇಶಕ್ಕೆ ಹೊರೆಯಾಗಿದೆ ಎಂದು ಟೀಕಿಸಿದ್ದಾರೆ.

ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ನಾನು ಗುಜರಾತ್ ಮುಖ್ಯಮಂತ್ರಿಯಾಗಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ.

ನಾನು ಮತ್ತು ಸಮಾವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಿಎಂ ಆಗಿದ್ದ ಅವಧಿಗಿಂತಲೂ ಹೆಚ್ಚು ಕಾಲ ಗುಜರಾತ್ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ ಎಂದು ಕೊಚ್ಚಿಕೊಂಡಿದ್ದಾರೆ. ಆದರೆ ಅವರಿಂದ ಗುಜರಾತ್‍ಗೆ ಮತ್ತು ದೇಶಕ್ಕೆ ಹೊರೆಯಾಯಿತೆಂದು ಟೀಕಿಸಿದರು.

ಇವರು ಗುಜರಾತ್ ಸಿಎಂ ಆಗಿದ್ದಾಗ ಅತ್ಯಂತ ಭೀಕರ ಕೋಮು ಗಲಭೆ ನಡೆದು ನೂರಾರು ಜನರು ಬಲಿಯಾದರು, ಕೋಮು ಗಲಭೆ ಮತ್ತು ಜನರನ್ನು ಬಲಿ ತೆಗೆದುಕೊಂಡ ಆರೋಪ ಇವರ ಮೇಲಿದೆ ಎಂದು ಆಪಾದಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ