ಪುಣೆ, ಮೇ 15-ಬೆಳಗಿನ ವಾಯುವಿಹಾರ ಮೂವರು ಮಹಿಳೆಯರಿಗೆ ಮೃತ್ಯುವಾಗಿ ಪರಿಣಮಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಹಮದ್ನಗರ್-ಕಲ್ಯಾಣ್ ಹೆದ್ದಾರಿಯ ಜುನ್ನಾರ್ ತಹಸೀಲ್ನ ಉದಾಪುರ್ ಗ್ರಾಮದ ಬಳಿ ಮುಂಜಾನೆ 5.30 ರಿಂದ 6 ಗಂಟೆ ನಡುವೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಮಹಿಳೆಯರು ಮಾರ್ನಿಂಗ್ ವಾಕ್ ಮಾಡುತ್ತಿದ್ದಾಗ ಯಾವುದೋ ವಾಹನ ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ದುರ್ಘಟನೆಯಲ್ಲಿ ಎಲ್ಲ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಒಟೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.