ಸಿದ್ದರಾಮಯ್ಯನವರನ್ನು ಸರಿಮಾಡುವುದಕ್ಕೆ ಆಗಲ್ಲ-ಶಾಸಕ ಸಿ.ಟಿ.ರವಿ

ಹುಬ್ಬಳ್ಳಿ,ಮೇ 16-ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ನಾವು ಬೀಳಿಸುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿ ಈಗಾಗಲೇ ಅಸಮಾಧಾನದ ಹೊಗೆಯಾಡುತ್ತಿದೆ. ಸರ್ಕಾರ ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮೇ 23ರ ಫಲಿತಾಂಶ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲಿದೆ. ಮೈತ್ರಿ ಸರ್ಕಾರಕ್ಕೆ ಇನ್ನೂ ಆಯಸ್ಸಿದೆ ಎಂದು ಯಾರಿಗೂ ಅನಿಸುತ್ತಿಲ್ಲ ಎಂದರು.

ದೇಶದಾದ್ಯಂತ ಮೋದಿಯ ಅಲೆ ಇದೆ.ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಬಿಜೆಪಿ ಗೆಲ್ಲಲಿದೆ. ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಮೇಶ ಜಾರಕಿಹೊಳಿಯವರು ಏನು ಮಾಡುತ್ತಿದ್ದಾರೆ ಅನ್ನೋದನ್ನ ತಲೆಕೆಡಿಸಿಕೊಂಡಿಲ್ಲ. ಮೋದಿ ಬಗ್ಗೆ ಸಿದ್ಧರಾಮಯ್ಯ ಹಗುರವಾಗಿ ಮಾತನಾಡುವ ಮೂಲಕ ಸುಸಂಸ್ಕøತ ರಾಜ್ಯಕ್ಕೆ ಅಪಮಾನ ಮಾಡಿದ್ದಾರೆ. ಸಿದ್ಧರಾಮಯ್ಯ ಅವರನ್ನ ಸರಿಮಾಡುವುದಕ್ಕೆ ಆಗಲ್ಲ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂದು ಲೇವಡಿ ಮಾಡಿದರು.

ಮೋಡಬಿತ್ತನೆ ಎಂಬುದು ಮೈತ್ರಿ ಸರ್ಕಾರಕ್ಕೆ ಹೋಲ್‍ಸೇಲ್ ಬಿಸಿನೆಸ್ ಆಗಿದೆ. ಈ ಬಗ್ಗೆ ಮೈತ್ರಿ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ