ಗೋಡ್ಸೆ ದೇಶ ಭಕ್ತ ಎಂದ ಸಾದ್ವಿ ಪಜ್ನಾ ಸಿಂಗ್

ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ನೀಡಿದ್ದಾರೆ.

ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದರು.

ಸಾಧ್ವಿ ಪ್ರಜ್ಞಾಸಿಂಗ್ ಅವರು ಏಪ್ರಿಲ್‍ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು. ಈಗ ಮಹಾತ್ಮಾ ಗಾಂಧಿ ಹತ್ಯೆಗೈದ ಗೋಡ್ಸೆ ದೇಶಭಕ್ತ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ತಿಸಿದ್ದಾರೆ.

Godse a ‘deshbhakt’, says Pragya Thakur

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ