ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ ಯೋಧ ಹುತಾತ್ಮನಾಗಿದ್ದಾನೆ.
ದಲೀಪುರಾ ಪ್ರದೇಶದಲ್ಲಿ ಎಸ್ಒಜಿ ಮತ್ತು ಸಿಆರ್ಪಿಎಫ್ ಪಡೆ ನಡೆಸಿದ ಜಂಟಿ ಕಾರ್ಯಾಚರಣೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸದ್ಯ ಭದ್ರತಾ ಪಡೆ ಮತ್ತಷ್ಟು ಉಗ್ರರಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಈ ಪ್ರದೇಶದಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಸೇವೆಗಳನ್ನು ನಿರ್ಬಂಧಿಸಲಾಗಿದ್ದು, ಘಟನೆ ಬಳಿಕ ಪುಲ್ವಾಮಾದಲ್ಲಿ ಕರ್ಫ್ಯೂ ಹೇರಲಾಗಿದೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ಅಡಗುತಾಣಗಳ ಕುರಿತು ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗುಂಡಿನ ಕಾಳಗ ಮುಂದುವರೆದಿದೆ.