ಕೊಟ್ಟ ಭರವಸೆ ಈಡೇರಿಸುವುದು ಬಿಜೆಪಿ ಅಲ್ಲ, ಕಾಂಗ್ರೆಸ್: ರಾಬರ್ಟ್ ವಾದ್ರಾ

ನವದೆಹಲಿ: ಕಾಂಗ್ರೆಸ್ ಬಿಜೆಪಿಯಂತೆ ಸುಳ್ಳು ಭರವಸೆಗಳನ್ನು ನೀಡುವ ಪಕ್ಷವಲ್ಲ. ಜನರಿಗೆ ಏನು ಬೇಕೋ ಅದನ್ನು ನಮ್ಮ ಪಕ್ಷ ನೀಡುತ್ತದೆ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಕಿಡಿಕಾರಿರುವ ರಾಬಾರ್ಟ್ ವಾದ್ರಾ, ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನರಿಗೆ ಟೊಳ್ಳು ಹಾಗೂ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್​ ಬಿಜೆಪಿಯಂತೆ ಮಾಡುವುದಿಲ್ಲ. ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತದೆ. ಜನರಿಗೆ ಏನು ಬೇಕೋ ಅದನ್ನು ನಮ್ಮ ಪಕ್ಷ ನೀಡುತ್ತದೆ ಎಂದು ಬರೆದಿದ್ದಾರೆ.

ಅಲ್ಲದೆ ಎರಡು ಫೋಟೋಗಳನ್ನೂ ಅವರು ಫೇಸ್​ಬುಕ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಒಂದು ಫೋಟೋದಲ್ಲಿ ಅವರು ಜನರನ್ನು ಮತದಾನ ಮಾಡಲು ಒತ್ತಾಯಿಸುತ್ತಿದ್ದಾರೆ. ಇನ್ನೊಂದು ಫೋಟೋದಲ್ಲಿ ರಾಬರ್ಟ್​ ವಾದ್ರಾ ಬಡವರಿಗೆ ಆಹಾರ ನೀಡುತ್ತಿರುವುದನ್ನು ಹಾಕಿದ್ದಾರೆ.

ಮೇ 19ರಂದು ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೇ ಹಂತದ ಮತದಾನ ಏಳುರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ