ಶಾರದಾ ಚಿಟ್ ಫಂಡ್ ಹಗರಣ; ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಗೆ ಮತ್ತೆ ಬಂಧನ ಭೀತಿ

ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಹಿನ್ನಡೆಯಾಗಿದ್ದು, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ ‘ಬಂಧನದಿಂದ ಸುರಕ್ಷತೆ’ ಆದೇಶವನ್ನು ತೆರುವು ಗೊಳಿಸಿದೆ.

ಸಿಬಿಐ ವಾದಕ್ಕೆ ಮನ್ನಣೆ ನೀಡಿರುವ ಸುಪ್ರೀಂ ಕೋರ್ಟ್ ತಾನು ರಾಜೀವ್ ಕುಮಾರ್ ಅವರ ಮೇಲೆ ವಿದಿಸಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಆಧಿಕಾರಿ ರಾಜೀವ್ ಕುಮಾರ್ ಅವರ ವಿರುದ್ಧ ಸಾಕ್ಷ್ಯ ನಾಶ ಪಡಿಸಿದ ಗಂಭೀರ ಆರೋಪವಿದ್ದು, ಈ ಹಿಂದೆ ಇದಕ್ಕೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೊಳಪಡಿಸಲು ಸಿಬಿಐ ಅಧಿಕಾರಿಗಳು ಮುಂದಾದಾಗ ಅವರನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದರು.

ಕೇಂದ್ರ ಸರ್ಕಾರ ಸಿಬಿಐ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಆಹೋರಾತ್ರಿ ಧರಣಿ ಕೂಡ ನಡೆಸಿದ್ದರು. ಬಳಿಕ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ರಾಜೀವ್ ಕುಮಾರ್ ಅವರಿಗೆ ಬಂಧನದಿಂದ ರಕ್ಷಣೆ ನೀಡಿತ್ತು. ಇದೀಗ ಸಿಬಿಐ ವಾದಕ್ಕೆ ಮನ್ನಣೆ ನೀಡಿರುವ ಸುಪ್ರೀಂ ಕೋರ್ಟ್ ತಾನು ರಾಜೀವ್ ಕುಮಾರ್ ಅವರ ಮೇಲೆ ವಿದಿಸಿದ್ದ ಬಂಧನದಿಂದ ಸುರಕ್ಷತೆ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿದೆ.

SC Withdraws Interim Protection From Arrest Given To Ex-Kolkata Police Chief Rajeev Kumar

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ