ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ: ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ: ಐದು ವರ್ಷಗಳ ನಮ್ಮ ಸರಕಾರದ ಸಾಧನೆ ಬಗ್ಗೆ ತೃಪ್ತಿಯಿದೆ. ಸಂಪೂರ್ಣ ಬಹುಮತದೊಂದಿಗೆ ಎರಡನೇ ಅವಧಿಗೆ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆ- 2019ರ ಕೊನೇ ಹಂತದ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದ ಹಿನ್ನಲೆಯಲ್ಲಿ ಬಿಜೆಪಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೀರ್ಘ ಕಾಲದ ಬಳಿಕ ಸತತ ಎರಡನೇ ಅವಧಿಗೆ ಸರಕಾರವೊಂದು ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರುತ್ತಿರುವುದು ಇದೇ ಮೊದಲು ಎಂದರು.

ನನಗೆ ದೊರೆತ ಬೆಂಬಲದಿಂದ ಮನಸ್ಸು ತುಂಬಿ ಬಂದಿದೆ. ನನಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ನಮ್ಮ ಪ್ರಜಾಪ್ರಭುತ್ವದ ಶಕ್ತಿ ಜಗತ್ತಿಗೇ ತಿಳಿದಿದೆ. ಜಗತ್ತಿನ ಮೇಲೆ ಪ್ರಭಾವ ಬೀರುವ ಶಕ್ತಿ ಭಾರತಕ್ಕಿದೆ ಎಂದರು.

ಕಳೆದ ಐದು ವರ್ಷಗಳಲ್ಲಿ ತಮಗೆ ದೇಶದ ಸಂಪೂರ್ಣ ಸಹಕಾರ ದೊರೆತಿದ್ದು, ದೇಶಸೇವೆ ಮಾಡಲು ಅವಕಾಶ ದೊರೆತಿದ್ದು ತಮ್ಮ ಪೂರ್ವ ಜನ್ಮದ ಪುಣ್ಯ ಎಂದು ಹೇಳಿದರು. ಇದೇ ವೇಳೆ ದೇಶ ಮುನ್ನಡೆಸುವಲ್ಲಿ ಮಾಧ್ಯಮಗಳೂ ಕೂಡ ತಮಗೆ ಸಹಕಾರ ನೀಡಿದ್ದು, ಇದಕ್ಕಾಗಿ ನಾನು ಮಾಧ್ಯಮ ಲೋಕಕ್ಕೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಹೇಳಿದರು.

ನನಗೆ ದೊರೆತ ಬೆಂಬಲದಿಂದ ಮನಸ್ಸು ತುಂಬಿ ಬಂದಿದೆ. ನನಗೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ದೇಶದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಪ್ರಜಾಪ್ರಭುತ್ವದ ಶಕ್ತಿ ಜಗತ್ತಿಗೇ ತಿಳಿದಿದೆ. ಜಗತ್ತಿನ ಮೇಲೆ ಪ್ರಭಾವ ಬೀರುವ ಶಕ್ತಿ ಭಾರತಕ್ಕಿದೆ. ಒಂದು ಪ್ರಾಮಾಣಿಕ ಸರಕಾರ 2014ರ ಮೇ 17ರಂದು, ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಒಂದು ದಿನದ ಬಳಿಕ ಜನ್ಮ ತಾಳಿತು ಎಂದು ಪ್ರಧಾನಿ ಮೋದಿ ಹೇಳಿದರು.

ಇದೇ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರತಿ 15 ದಿನಗಳಿಗೊಂದು ಹೊಸ ಯೋಜನೆಯನ್ನು ಪ್ರಕಟಿಸಿದೆ. ಕಳೆದ ಐದು ವರ್ಷಗಳಲ್ಲಿ ಮೋದಿ ಸರ್ಕಾರ ಸಮಾಜದ ದುರ್ಬಲ ವರ್ಗದ ಅಭಿವೃದ್ಧಿಗೆ 133 ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಮೋದಿ ಆಡಳಿತದಲ್ಲಿ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಕ್ಕೆ ಆಸ್ಪದವೇ ಇಲ್ಲ. ಮೋದಿ ಸರ್ಕಾರದಲ್ಲಿ ದೇಶದ ಜನತೆ ಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದರು. ಕೇಂದ್ರ ಸರ್ಕಾರದ ನಾನಾ ಯೋಜನೆಗಳಿಂದ 50 ಕೋಟಿ ಜನರು ಲಾಭ ಪಡೆದಿದ್ದಾರೆ. ಬಡವರು, ಮಹಿಳೆಯರು ಮತ್ತು ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಾಸ’ ಅಜೆಂಡಾ ಭಾರತವನ್ನೇ ಬದಲಾಯಿಸಿದೆ ಎಂದು ತಿಳಿಸಿದರು.

ಇನ್ನು ಚುನಾವಣೆ ಪ್ರಚಾರದ ಭಾಗವಾಗಿ ಪ್ರಧಾನಿ ಮೋದಿ 142 ರ‍್ಯಾಲಿಗಳನ್ನು 4 ರೋಡ್‌ ಶೋ ನಡೆಸಿದ್ದಾರೆ. 2014ರ ಗೆಲುವು ಐತಿಹಾಸಿಕ. ಆದರೆ ಈ ಬಾರಿ ಅದಕ್ಕೂ ಹೆಚ್ಚಿನ ಬಹುಮತದೊಂದಿಗೆ ಗೆಲ್ಲುತ್ತೇವೆ . ಅಭಿವೃದ್ಧಿ ಮತ್ತು ರಾಷ್ಟ್ರೀಯ ಭದ್ರತೆ ನಮ್ಮ ಸರಕಾರದ ಪ್ರಮುಖ ಆದ್ಯತೆಗಳಾಗಿವೆ ಎಂದು ಶಾ ಹೇಳಿದ್ದಾರೆ.

Prime Minister Narendra Modi’s First Ever Press Conference

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ