ನಾವು ಕಾಂಗ್ರೆಸ್ ಜತೆಗಿದ್ದೇವೆ ಎಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಬೆಂಬಲ ಘೋಷಿಸಿದ್ದಾರೆ.

‘ನಾವು ಕಾಂಗ್ರೆಸ್ ಜತೆಗಿದ್ದೇವೆ. ಇದಕ್ಕಿಂತ ಹೆಚ್ಚೇನೂ ಹೇಳಲಾರೆ. ಮೇ 23ರಂದು ಫಲಿತಾಂಶ ಬಂದ ಬಳಿಕ ಇಡೀ ದೇಶಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಮುಂದಿನ ಬೆಳವಣಿಗೆಗಳೂ ಅದನ್ನೇ ಆಧರಿಸಿರುತ್ತವೆ’ ಎಂದು ದೇವೇಗೌಡರು ತಿಳಿಸಿದದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಜತೆಗೂಡಿ ಮೈತ್ರಿ ಸರಕಾರ ರಚಿಸಿರುವ ಜೆಡಿಎಸ್‌, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿತ್ತು. ತಮ್ಮ ಪಕ್ಷ ಪ್ರಧಾನಿ ಹುದ್ದೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿಗೆ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ ಬಳಿಕ ಗೌಡರ ಈ ಹೇಳಿಕೆ ಹೊರಬಿದ್ದಿದೆ.

ಈ ನಡುವೆ, ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ 18-19 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕುಮಾರಸ್ವಾಮಿ ಪುನರುಚ್ಚರಿಸಿದ್ದಾರೆ. ದೇವೇಗೌಡರ 87ನೇ ಜನ್ಮದಿನ ಪ್ರಯುಕ್ತ ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಹೊರಡುವ ಮುನ್ನ ಎಚ್‌ಡಿಕೆ ಈ ಹೇಳಿಕೆ ನೀಡಿದ್ದರು.

ಕಾಂಗ್ರೆಸ್‌ ಬೆಂಬಲವಿಲ್ಲದೆಯೇ ಪ್ರಾದೇಶಿಕ ಪಕ್ಷಗಳು ಕೇಂದ್ರದಲ್ಲಿ ಸರಕಾರ ರಚಿಸಲು ಸಾಧ್ಯವಿಲ್ಲ ಎಂದು ದೇವೇಗೌಡರು ಹೇಳಿದ್ದರು.

lok sabha election,h d devegowda,congress-jds

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ