ಮೈತ್ರಿ ನಾಯಕರನ್ನು ತಣ್ಣಗಾಗಿಸಲು ಸಿಎಂ ಹೆಚ್ ಡಿಕೆ ಹೊಸ ಪ್ರಯೋಗ

ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ನಾಯಕರ ಪರಸ್ಪರ ವಾಗ್ದಾಳಿ, ಗೊಂದಲದ ಹೇಳಿಕೆಗಳಿಗೆ ತೆರೆ ಎಳೆಯಲು ಹಾಗೂ ದೋಸ್ತಿ ನಾಯಕರನ್ನು ತಣ್ಣಗಾಗಿಸಲು ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಹೊಸ ತಂತ್ರ ಬಳಿಸಿದ್ದಾರೆ.

ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಯ ನಮ್ಮೆಲ್ಲರ ಆಶಯ ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಮೈತ್ರಿಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು ಇಂತಹ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ, ವಿವಾದಾತ್ಮಕ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಾಧನೆಗಳೇನು ಎಂದು ಪ್ರಶ್ನಿಸಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಗುರಿಯಾಗಿದ್ದರು. ಸದ್ಯ ಜೆಡಿಎಸ್ ಹಿರಿಯ, ಅನುಭವಿ ನಾಯಕ ಬಸವರಾಜ್ ಹೊರಟ್ಟಿ ಅವರು ಗೊಂದಲಗಳ ನಡುವೆ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸುವುದಕ್ಕಿಂತ ಸರ್ಕಾರ ವಿಸರ್ಜನೆ ಮಾಡಿ ಚುನಾವಣೆ ಎದುರಿಸುವುದು ಉತ್ತಮ ಎಂದಿದ್ದರು. ಈ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಜೆಡಿಎಸ್ ಸೇರಿದಂತೆ ಕಾಂಗ್ರೆಸ್ ನಾಯಕರನ್ನೂ ಸಮಾಧಾನಪಡಿಸುವ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ ಈಗ ಕೇಂದ್ರದತ್ತ ಗಮನ ಹಸಿರುವಂತೆ ಹೇಳಿ ರಾಜ್ಯ ಸರ್ಕಾರ ವಿರುದ್ಧ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

We are on the verge of formation of a new Government at the centre: CM H D Kumaraswamy

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ