ಶಾಂತಿಯುತವಾಗಿ ನಡೆದ ಮತದಾನ

ಬೆಂಗಳೂರು, ಮೇ 19- ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಕಾರಣಗಳಿಂದಾಗಿ ಕೆಲವೊಂದು ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ಗಳನ್ನು ಬದಲಾವಣೆ ಮಾಡಲಾಗಿದೆ. ಅದನ್ನು ಹೊರತುಪಡಿಸಿದರೆ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಹೇಳಿದರು.

ಮಧ್ಯಾಹ್ನ ಒಂದು ಗಂಟೆ ವೇಳೆಗೆ ಚಿಂಚೋಳಿಯಲ್ಲಿ ಶೇ.40.40, ಕುಂದಗೋಳದಲ್ಲಿ ಶೇ.42.73ರಷ್ಟು ಮತದಾನವಾದ ವರದಿಯಾಗಿತ್ತು ಎಂದು ತಿಳಿಸಿದರು.
ಬೆಳಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸುತ್ತಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ