ಮೈಸೂರು, ಮೇ 19-ಒಂದು ವರ್ಷದಲ್ಲಿ ನಾವು ಮಾಡಬೇಕಾದ ಅಭಿವೃದ್ಧಿ ಕಾರ್ಯವನ್ನು ಮಾಡಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.
ಒಂದು ವರ್ಷದಲ್ಲಿ ಹಲವು ಚುನಾವಣೆಗಳು ಬಂದವು. ಬಿಜೆಪಿ ಶಾಸಕರ ಖರೀದಿಗೆ ಮುಂದಾಯಿತು. ಈ ನಡುವೆಯೇ ಲೋಕಸಭಾ ಚುನಾವಣೆಯೂಬಂದಿತು. ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಹೇಳಿದರು.
ಮುಂದಿನ ನಾಲ್ಕು ವರ್ಷಗಳಲ್ಲಿ ಸಮರ್ಥವಾಗಿ ಆಡಳಿತ ನಡೆಸುವ ವಿಶ್ವಾಸವಿದೆ ಎಂದು ಹೇಳಿದರು.
ಬಸವರಾಜ ಹೊರಟ್ಟಿಯವರು ನೀಡಿರುವ ಹೇಳಿಕೆ ವೈಯಕ್ತಿಕವಾದುದು. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ವರದಿಗಾರರ ಪ್ರಶ್ನೆಗೆ ತನ್ವೀರ್ಸೇಠ್ ಉತ್ತರಿಸಿದರು.