ಬೆಂಗಳೂರು,ಮೇ 20- ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಪ್ರಾರ್ಥಿಸಿ ಪಕ್ಷದ ಕಚೇರಿಯಲ್ಲಿಂದು ವಿಶೇಷವಾದ ಪೂಜೆ ಸಲ್ಲಿಸಲಾಯಿತು.
ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ, ಶಾಸಕರಾದ ಡಾ.ಅಶ್ವಥ್ ನಾರಾಯಣ, ಕಳಸಪ್ಪ ಬಂಡಿ, ದತ್ತಾತ್ರೇಯ ಪಾಟೀಲ್ ರೇವೂರ್, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಮತ್ತಿತರ ಪ್ರಮುಖರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಗಣಪತಿ ಹೋಮ, ರುದ್ರಯಾಗ, ಚಂಡಿಕಾ ಹೋಮ, ಶತ್ರು ಸಂಹಾರ ಯಾಗ ಸೇರಿದಂತೆ ಹಲವು ಹೋಮಹವನಗಳನ್ನು ನಡೆಸಲಾಯಿತು.
ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ವಿಶೇಷ ಪೂಜೆಯ ನೆರವೇರಿಸಿ, ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರ 2ನೇ ಬಾರಿಗೆ ಅಧಿಕಾರಕ್ಕೆ ಬರಬೇಕು, ಅದೇ ರೀತಿ ರಾಜ್ಯದಲ್ಲೂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಿ ರಾಜ್ಯ ಸುಭೀಕ್ಷೆಯಿಂದ ಕೂಡಿರಲಿ ಎಂದು ಪ್ರಾರ್ಥಿಸಲಾಯಿತು.