ಕಮಲ್ ಹಾಸನ್ ಗೆ ನಿರೀಕ್ಷಣಾ ಜಾಮೀನು ಮಂಜೂರು

ಚೆನ್ನೈ: ನಾಥೂರಾಮ್ ಗೋಡ್ಸೆ ದೇಶದ ಮೊದಲ ಹಿಂದೂ ಭಯೋತ್ಪಾದಕ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಅಧ್ಯಕ್ಷ ಕಮಲ್ ಹಾಸನ್‌ಗೆ ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅರವಕುರುಚ್ಚಿ ವಿಧಾನಸಭೆ ಉಪಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ. ಮುಸ್ಲಿಂ ಬಾಹುಳ್ಯದ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ.ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ.

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಒಬ್ಬ ಹಿಂದೂ ಆಗಿದ್ದ. ಆತನ ಹೆಸರು ನಾಥೂರಾಮ್ ಗೋಡ್ಸೆ’ ಎಂದು ಕಮಲ್ ಹಾಸನ್ ಹೇಳಿದ್ದರು.

ಕಮಲ್‌ ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಬಂಧನದ ಭೀತಿ ಎದುರಾಗಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಮದ್ರಾಸ್ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ