ಬೆಂಗಳೂರು: ರಾಜ್ಯದಲ್ಲಿನ ಯಾವ ಲೋಕಸಭೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ಸಿವೋಟರ್ ಸಮೀಕ್ಷೆ ಬಹಿರಂಗಪಡಿಸಿದೆ. ಅಂತೆಯೇ ಬಿಜೆಪಿಗೆ ಅತ್ಯಧಿಕ ಸ್ಥಾನ ಬರಲಿದೆ ಎಂದೂ ತಿಳಿಸಿದೆ.
ಸಿವೋಟರ್ ಮತದಾನೋತ್ತರ ಸಮೀಕ್ಷೆ ಪ್ರಕಾರ, ಬಿಜೆಪಿಗೆ 18, ಕಾಂಗ್ರೆಸ್ ಗೆ 7 ಮತ್ತು ಜೆಡಿಎಸ್ ಗೆ ಎರಡು ಸ್ಥಾನ ಬರಲಿದೆ.
ಇನ್ನು ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗೆ ಜಯ ಸಿಗಲಿದ್ದು, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಸೋಲಲಿದ್ದಾರೆ.
ಸಿದ್ದರಾಮಯ್ಯರಿಗೆ ಪ್ರತಿಷ್ಠೆಯ ಕ್ಷೇತ್ರವಾಗಿರುವ ಮೈಸೂರು-ಕೊಡಗಿನಲ್ಲಿ ಕಾಂಗ್ರೆಸ್ನ ಸಿ.ಎಚ್. ವಿಜಯಶಂಕರ್ ಗೆಲ್ಲಲಿದ್ದಾರೆ. ಇನ್ನು ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ, ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಳಿನ ಕುಮಾರ್ ಕಟೀಲು, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಬೆಳಗಾವಿಯಲ್ಲಿ ಬಿಜೆಪಿಯ ಸುರೇಶ್ ಅಂಗಡಿ, ರಾಯಚೂರಿನಲ್ಲಿ ಬಿಜೆಪಿಯ ಅಮರೇಶ್ವರ ನಾಯಕ, ಕೋಲಾರದಲ್ಲಿ ಕೆ.ಎಚ್. ಮುನಿಯಪ್ಪ, ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಸುರೇಶ್, ಬಳ್ಳಾರಿಯಲ್ಲಿ ಬಿಜೆಪಿಯ ದೇವೇಂದ್ರಪ್ಪ ಗೆಲ್ಲಲಿದ್ದಾರೆ.
ಅಂತೆಯೇ, ಚಿಕ್ಕಬಳ್ಳಾಪುರದಲ್ಲಿ ಎಂ. ವೀರಪ್ಪ ಮೊಯ್ಲಿ, ತುಮಕೂರಿನಲ್ಲಿ ಎಚ್.ಡಿ. ದೇವೇಗೌಡ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ, ಬೆಂಗಳೂರು ಕೇಂದ್ರದಲ್ಲಿ ಬಿಜೆಪಿಯ ಪಿಸಿ ಮೋಹನ್, ಉಡುಪಿ-ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ, ಕಲಬುರಗಿಯಲ್ಲಿ ಬಿಜೆಪಿಯ ಉಮೇಶ್ ಜಾಧವ್, ಚಾಮರಾಜ ನಗರದಲ್ಲಿ ಶ್ರೀನಿವಾಸ ಪ್ರಸಾದ್, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ, ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡ, ದಾವಣಗೆರೆಯಲ್ಲಿ ಬಿಜೆಪಿಯ ಸಿದ್ದೇಶ್ವರ, ಬೆಂಗಳೂರು ದಕ್ಷಿಣದಲ್ಲಿ ಜೇಜಸ್ವಿ ಸೂರ್ಯ, ಚಿತ್ರದುರ್ಗದಲ್ಲಿ ಕಾಂಗ್ರೆಸ್ ನ ಚಂದ್ರಪ್ಪ ಮತ್ತು ವಿಜಯಪುರದಲ್ಲಿ ಬಿಜೆಪಿಯ ರಮೇಶ್ ಜಿಗಜಿಣಗಿಗೆ ಜಯ ಸಿಗಲಿದೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ.