ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 28ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿ ಹಲವು ಗಣ್ಯರು ವೀರ್ ಭೂಮಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ಗೌರವ ಸಮರ್ಪಿಸುವುದಾಗಿ ತಿಳಿಸಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯಸ್ಮರಣೆಯಾಗಿದ್ದು, ಅವರಿಗೆ ನನ್ನ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.
1944. ಆಗಸ್ಟ್ 20ರಲ್ಲಿ ಜನಿಸಿದ್ದ ರಾಜೀವ್ ಗಾಂಧಿಯವರು ನಾಲ್ಕು ಬಾರಿ ಉತ್ತರ ಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ಭಾರತ ರತ್ನ ಪ್ರಶಸ್ತಿ ಪುರಸ್ಕೃತರೂ ಆಗಿದ್ದ ಅವರು ಆರನೇ ಪ್ರಧಾನ ಮಂತ್ರಿಯಾಗಿ 1984 ರಿಂದ 1989ರವರೆಗೆ ಸೇವೆ ಸಲ್ಲಿಸಿದ್ದರು. 1984ರಲ್ಲಿ ಮಾಜಿ ಪ್ರಧಾನಿ, ತಾಯಿ ಇಂದಿರಾ ಗಾಂಧಿಯವರ ಹತ್ಯೆಯಾದ ಬಳಿಕ 1991 ಮೇ 21ರಂದು ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ಚುನಾವಣೆ ಪ್ರಚಾರ ಕೈಗೊಂಡಿದ್ದ ವೇಳೆ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಲಮ್(ಎಲ್‌ಟಿಟಿಇ)ಗೆ ಸೇರಿದ ಆತ್ಮಾಹುತಿ ಬಾಂಬರ್ ದಾಳಿಗೆ ತುತ್ತಾಗಿದ್ದರು. ಬಳಿಕ ಯಮುನಾ ನದಿ ದಂಡೆಯ ವೀರ್ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿತ್ತು.
Rajiv Gandhi death anniversary: PM Modi, Gandhi family pay tributes