ಬೆಂಗಳೂರು,ಮೇ22- ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕನಕಪುರದ ರಾಜ್ಕುಮಾರ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ನಾಯಕರ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್ನ ನರಸಿಂಹಮೂರ್ತಿ ಮತ್ತು ರಾಜ್ಕುಮಾರ್ ಇಬ್ಬರೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು.
ನರಸಿಂಹಮೂರ್ತಿ ಅವರನ್ನು ರಾತ್ರೋರಾತ್ರಿ ಅನರ್ಹಗೊಳಿಸಲಾಗಿದೆ. ಇದರ ಬಗ್ಗೆ ನನಗೆ ಯಾವ ಮಾಹಿತಿಯೂ ಇರಲಿಲ್ಲ. ಇದರ ಹಿಂದೆ ಯಾರ ಕೈವಾಡ ಇದೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್ನಿಂದ ರಾಜ್ಕುಮಾರ್ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.