ನವದೆಹಲಿ, ಮೇ 22-ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಮುಂಜಾನೆ ಸಾದಾರಣ ತೀವ್ರತೆಯ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 5.8ರ್ಟು ತೀವ್ರತೆಯ ಭೂಕಂಪದಿಂದ ಸಾವು-ನೋವು ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.
ಮುಂಜಾನೆ 6.09ರಲ್ಲಿ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ಅಂಡಮಾನ್ ದ್ವೀಪದಲ್ಲಿತ್ತು ಎಂದು ರಾಷ್ಟ್ರೀಯ ಭೂಗರ್ಭ ಅಧ್ಯಯನ ಕೇಂದ್ರ ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹದಲ್ಲಿ ಭೂಕಂಪನಗಳ ಸೂಕ್ಷ್ಮ ಪ್ರದೇಶವಾಗಿದೆ.