ಬೆಂಗಳೂರು ದಕ್ಷಿಣ; ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಭಾರೀ ಮುನ್ನಡೆ

ಬೆಂಗಳೂರುಬಿಜೆಪಿ ಭದ್ರಕೋಟೆ ಎಂದೇ ಕರೆಯಲಾಗುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ದಿವಂಗತ ಅನಂತಕುಮಾರ್ 1996ರಿಂದ 2014ರ ವರೆಗೆ 6 ಭಾರಿ ಪ್ರತಿನಿಧಿಸಿದ್ದರು. ಆದರೆ, ಅವರ ಅಕಾಲಿಕ ಮರಣದ ನಂತರ ಈ ಕ್ಷೇತ್ರ ಹಲವಾರು ಕಾರಣಗಳಿಗಾಗಿ ಸುದ್ದಿಯ ಕೇಂದ್ರದಲ್ಲಿದೆ.

ಅನಂತಕುಮಾರ್ ಮರಣದ ನಂತರ ಅವರ ಪತ್ನಿ ತೇಜಸ್ವಿನಿ ಅವರಿಗೆ ಪಕ್ಷ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಹ ಕೇಂದ್ರಕ್ಕೆ ಅವರ ಹೆಸರನ್ನೇ ಅಂತಿಮಗೊಳಿಸಿ ಶಿಫಾರಸು ಮಾಡಿದ್ದರು.ಆದರೆ, ಕೊನೆಕ್ಷಣದ ನಾಟಕೀಯ ಬೆಳವಣಿಗೆಯಲ್ಲಿ ಬಸವನಗುಡಿ ಶಾಸಕ ರವಿಸುಬ್ರಮಣ್ಯ ಅವರ ಅಣ್ಣನ ಮಗ ಆರ್​ಎಸ್​ಎಸ್​ ಮೂಲದ 28ರ ಹರೆಯದ ತೇಜಸ್ವಿ ಸೂರ್ಯನಿಗೆ ಟಿಕೆಟ್ ಘೋಷಿಸಲಾಗಿತ್ತು.

ಯುವಕ ತೇಜಸ್ವಿಗೆ ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಬಿ.ಕೆ. ಹರಿಪ್ರಸಾದ್ ಟಫ್ ಫೈಟ್​ ನೀಡುತ್ತಿದ್ದು, ಕೊನೆ ಕ್ಷಣದ ವರೆಗೆ ಈ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಯಾರು? ಎಂದು ಊಹಿಸುವುದು ಕಷ್ಟ.

ತೇಜಸ್ವಿಗೆ ಮುನ್ನಡೆಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 480 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.

ಇನ್ನೂ ಎರಡನೇ ಹಂತದ ಮತ ಎಣಿಕೆಯಲ್ಲಿ ತೇಜಸ್ವಿ ಸೂರ್ಯ 69,035 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಹರಿಪ್ರಸಾದ್ 31,432 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ತೇಜಸ್ವಿ ಸೂರ್ಯ 37,603 ಮತಗಳ ಭಾರೀ ಮುನ್ನಡೆ ಸಾಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ