
ನವದೆಹಲಿ: ಇಂದು ಲೋಕಸಮರದ ಮಹಾತೀರ್ಪಿನ ಹಿನ್ನೆಲೆ ಮತ ಏಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ಅಭ್ಯರ್ಥಿಯಾಗಿರುವ ಕೆಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಅಮೇಥಿಯಲ್ಲಿ ಭಾರಿ ಹಿನ್ನಡೆಯಾಗಿದೆ.
ರಾಹುಲ್ ಗಾಂಧಿಯವರು ಅಮೆಥಿ ಹಾಗೂ ವಯನಾಡು ಎರಡು ಕ್ಷೇತ್ರದಿಂದ ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ನಿಂತಿದ್ದ ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಆರಂಭಿಕ ಸುತ್ತುಗಳಲ್ಲಿ 5 ಸಾವಿರ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.
ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿ ಮುನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ಕಣಕ್ಕೆ ಇಳಿದಿರುವ ಸೋನಿಯಾ ಗಾಂಧಿ ಮುನ್ನಡೆಯಲಿದ್ದಾರೆ.