ಜನರ ತೀರ್ಪನ್ನು ಸ್ವಾಗತಿಸುತ್ತೇನೆ ಎಂದ ರಾಹುಲ್ ಗಾಂಧಿ

ನವದೆಹಲಿ: ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ದೇಶದ ಜನತೆ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜನತೆಯೇ ಮಾಲೀಕರು ಎಂದು ಹೇಳಿದ್ದೆ. ಹಾಗಾಗಿ, ನಮ್ಮ ಮಾಲೀಕರಾದ ಜನತೆ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಚುನಾವಣಾ ಫಲಿತಾಂಶದಿಂದ ಯಾರೂ ಹೆದರುವ ಅಗತ್ಯವಿಲ್ಲ. ಹೋರಾಟ ಮುಂದುವರೆಸೋಣ ಎಂದರು.

ಇದೇ ವೇಳೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಅಭಿನಂದಿಸುವುದಾಗಿ ತಿಳಿಸಿದರು.

ಫಲಿತಾಂಶ ಕಂಡು ಧೈರ್ಯಗೆಡುವ ಅವಶ್ಯಕತೆ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದವರು, ಸೋತವರು ಮತ್ತು ಪಕ್ಷದ ಕಾರ್ಯಕರ್ತರೆಲ್ಲರಿಗೂ ಈ ಮಾತು ಅನ್ವಯ ಎಂದರು.

ಅಮೇಠಿಯಲ್ಲಿ ತಮ್ಮ ವಿರುದ್ಧ ಬಿಜೆಪಿಯ ಸ್ಮೃತಿ ಇರಾನಿ ಗೆದ್ದಿದ್ದಾರೆ. ಬೇರೊಂದು ರಾಜ್ಯದಿಂದ ಬಂದು ಇಲ್ಲಿ ಸ್ಪರ್ಧಿಸಿ ಗೆದ್ದಿರುವ ಅವರಿಗೆ ಅಭಿನಂದನೆಗಳು.

ಅನ್ಯರಾಜ್ಯದವರಾದರೂ ಅವರ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿರುವ ಅಮೇಠಿ ಜನತೆಯ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ