ಕೋಲ್ಕತ್ತಾ: ಕಳೆದ ಬಾರಿ ಪಶ್ಚಿಮ ಬಂಗಾಳದಲ್ಲಿ ಬರೀ ಎರಡು ಸ್ಥಾನ ಮಾತ್ರ ಗೆದ್ದಿದ್ದ ಬಿಜೆಪಿ ಈ ಬಾರಿ ಸದ್ಯ 16 ಕ್ಷೇತ್ರಗಳಲ್ಲಿ ತೀವ್ರ ಮುನ್ನಡೆ ಸಾಧಿಸಿದ್ದು, ಅಲ್ಲಿನ ಬಲವಾದ ಪಕ್ಷ ತೃಣಮೂಲ ಕಾಂಗ್ರೆಸ್ 26ರಲ್ಲಿ ಮುಂದಿದೆ.
ರಾಜ್ಯವನ್ನು ತಮ್ಮ ವಶದಲ್ಲಿಯೇ ಇಟ್ಟುಕೊಳ್ಳಲು ತೀವ್ರ ಹೋರಾಟ ನಡೆಸಿದ್ದ ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭದ್ರಕೋಟೆಯನ್ನೇ ಮೋದಿ ಸುನಾಮಿ ಕೆಡವಿದೆ.
ಪಶ್ಚಿಮ ಬಂಗಾಳದ 42 ಲೋಕಸಭೆ ಚುನಾವಣಾ ಕ್ಷೇತ್ರಗಳ ಪೈಕಿ 2014ರಲ್ಲಿ ಕೇವಲ 2 ಕ್ಷೇತ್ರವನ್ನು ಮಾತ್ರ ಗೆದ್ದಿದ್ದ ಬಿಜೆಪಿ ಇದೀಗ ಮೋದಿ ಸುನಾಮಿಯಿಂದಾಗಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಟಿಎಂಸಿ 26 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.