ಪಶ್ಚಿಮ ಬಂಗಾಳ: ಮಮತಾ ಭದ್ರಕೋಟೆಯಲ್ಲಿ ಬಿಜೆಪಿ ಮುನ್ನಡೆ

ಕೋಲ್ಕತ್ತಾ: ಕಳೆದ ಬಾರಿ ಪಶ್ಚಿಮ ಬಂಗಾಳದಲ್ಲಿ ಬರೀ ಎರಡು ಸ್ಥಾನ ಮಾತ್ರ ಗೆದ್ದಿದ್ದ ಬಿಜೆಪಿ ಈ ಬಾರಿ ಸದ್ಯ 16 ಕ್ಷೇತ್ರಗಳಲ್ಲಿ ತೀವ್ರ ಮುನ್ನಡೆ ಸಾಧಿಸಿದ್ದು, ಅಲ್ಲಿನ ಬಲವಾದ ಪಕ್ಷ ತೃಣಮೂಲ ಕಾಂಗ್ರೆಸ್​ 26ರಲ್ಲಿ ಮುಂದಿದೆ.

ರಾಜ್ಯವನ್ನು ತಮ್ಮ ವಶದಲ್ಲಿಯೇ ಇಟ್ಟುಕೊಳ್ಳಲು ತೀವ್ರ ಹೋರಾಟ ನಡೆಸಿದ್ದ ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭದ್ರಕೋಟೆಯನ್ನೇ ಮೋದಿ ಸುನಾಮಿ ಕೆಡವಿದೆ.

ಪಶ್ಚಿಮ ಬಂಗಾಳದ 42 ಲೋಕಸಭೆ ಚುನಾವಣಾ ಕ್ಷೇತ್ರಗಳ ಪೈಕಿ 2014ರಲ್ಲಿ ಕೇವಲ 2 ಕ್ಷೇತ್ರವನ್ನು ಮಾತ್ರ ಗೆದ್ದಿದ್ದ ಬಿಜೆಪಿ ಇದೀಗ ಮೋದಿ ಸುನಾಮಿಯಿಂದಾಗಿ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಟಿಎಂಸಿ 26 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ