ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ.ಇದಕ್ಕೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಪಕ್ಷದ ಸಚಿವರು, ಶಾಸಕರು ಸಮ್ಮತಿ ಸೂಚಿಸಿದ್ದಾರೆ ಎಂದರು.
ಪ್ರತಿಪಕ್ಷ ಬಿಜೆಪಿಯ ಆಫರೇಷನ್ ಕಮಲ ಯಶಸ್ವಿ ಆಗೋವುದಿಲ್ಲ. ಸರ್ಕಾರ ಬೀಳಿಸುವ ಬಿಜೆಪಿ ಪ್ರಯತ್ನ ವಿಫಲವಾಗಲಿದೆ. ರಾಜ್ಯಸರ್ಕಾರಕ್ಕೆ ಜನಾದೇಶ ಇದ್ದು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಗೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.