ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ

ನವದೆಹಲಿ: ಉತ್ತರ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್​ ಬಬ್ಬರ್​ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು ರಾಜ್ ಬಬ್ಬರ್ ಈ ನಿರ್ಧಾರ ಕೈಗೊಂಡಿದ್ದಾರೆ.

ಕಾಂಗ್ರೆಸ್​ ಪಕ್ಷ ಉತ್ತರ ಪ್ರದೇಶದಲ್ಲಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ರಾಯ್​ಬರೇಲಿ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅಮೇಠಿಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಸೋಲನುಭವಿಸಿದ್ದರು.

ಈ ಹಿನ್ನೆಲೆಯಲ್ಲಿ ರಾಜ್​ ಬಬ್ಬರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ರಾಜ್​ ಬಬ್ಬರ್​ ‘ಜನರ ವಿಶ್ವಾಸ ಗಳಿಸಲು ಸಫಲರಾದ ವಿಜೇತರಿಗೆ ನನ್ನ ಅಭಿನಂದನೆಗಳು. ಉತ್ತರ ಪ್ರದೇಶ ಕಾಂಗ್ರೆಸ್​ಗೆ ಫಲಿತಾಂಶ ನಿರಾಶಾದಾಯಕವಾಗಿದೆ. ನನ್ನ ಜವಾಬ್ದಾರಿಯನ್ನು ನಿಭಾಯಿಸಲು ನಾನು ವಿಫಲನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

UP Congress chief Raj Babbar sends resignation to Rahul Gandhi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ