ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸ್ಥಾನ ಬಹುತೇಕ ಖಚಿತ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‍ಡಿಎ ಸರ್ಕಾರ ಎರಡನೇ ಅವಧಿಗೆ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಪ್ರಧಾನಿ ಮೋದಿ ಸಂಪುಟ ರಚನೆ ಕಸರತ್ತು ಆರಂಭವಾಗಿದ್ದು, ಯಾರಲ್ಲೆ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಇಮ್ಮಡಿಗೊಂಡಿದೆ.

ಪ್ರಧಾನಿ ಮೋದಿ ಆಪ್ತ ಅಮಿತ್ ಶಾ ಸಂಪುಟ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದ್ದು, ಅವರಿಗೆ ಗೃಹ ಖಾತೆ ಸಿಗುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು, ಅವರ ಕುಟುಂಬದ ಭದ್ರಕೋಟೆ ಎಂದೇ ಪರಿಗಣಿಸಲಾಗಿದ್ದ ಅಮೇಠಿಯಲ್ಲಿ ಸೋಲಿಸಿರುವ ಸ್ಮøತಿ ಇರಾನಿ ಅವರಿಗೆ ದೊಡ್ಡ ಹೊಣೆಗಾರಿಕೆ ಉಡುಗೊರೆ ಸಿಗುವ ನಿರೀಕ್ಷೆ ಇದೆ.

ಅನಾರೋಗ್ಯದಿಂದ ಬಳಲುತ್ತಿರುವ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್‍ಗೆ ಕೊಕ್ ನೀಡುವುದು ಖಚಿತವಾಗಿರುವುದು ಅಮಿತ್ ಶಾ ಸಂಪುಟ ಸೇರ್ಪಡೆ ವದಂತಿಗಳಿಗೆ ಬಲ ತುಂಬಿದೆ. ಇತ್ತ ಬಿಜೆಪಿ ಬಲವರ್ಧನೆಗೆ ಅಭೂತಪೂರ್ವ ಕೊಡುಗೆ ನೀಡಿದ ಕಾರಣಕ್ಕಾಗಿ ಕರ್ನಾಟಕದ ನಾಲ್ವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.

ಇಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ನೂತನ ಸಂಸದರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

PM modi,cabinet,amith shah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ