ರಾಹುಲ್ ಗಾಂಧಿ ರಾಜೀನಾಮೆ ಪ್ರಸ್ತಾಪ ತಿರಸ್ಕರಿಸಿದ ಕಾಂಗ್ರೆಸ್ ಮುಖಂಡರು

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲನುಭವಿಸಿದ ಹಿನ್ನಲೆಯಲ್ಲಿ ಪರಾಮರ್ಷೆ  ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಕ್ಷದ ಸೋಲಿನ ಹೊಣೆಹೊತ್ತು ರಾಜೀನಾಮೆ ನೀಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದರು. ಇದನ್ನು ವರಿಷ್ಠ ನಾಯಕರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ.

ಈ ಹಂತದಲ್ಲಿ ರಾಜೀನಾಮೆ ನೀಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಕಾರ್ಯಕರ್ತರು ಇನ್ನಷ್ಟು ಹತಾಶರಾಗುತ್ತಾರೆ. ಪಕ್ಷ ಸಂಘಟನೆಯ ಬಗ್ಗೆ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳೋಣ. ಸೋಲು, ಗೆಲುವು ಸಹಜ. ಈಗ ಆಗಿರುವ ತಪ್ಪುಗಳನ್ನು ತಿದ್ದಿಕೊಳ್ಳುವುದರತ್ತ ಗಮನ ಹರಿಸೋಣ ಎಂದು ಸಲಹೆ ನೀಡಿದರು.

ಮನಮೋಹನ್‌ ಸಿಂಗ್‌, ಕೆಸಿ ವೇಣುಗೋಪಾಲ್‌, ಗುಲಾಂ ನಬಿ ಆಜಾದ್‌, ದಿಗ್ವಿಜಯ್‌ ಸಿಂಗ್‌, ಅಶೋಕ್‌ ಗೆಹ್ಲೋಟ್‌, ಎ.ಕೆ. ಆಂಟನಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವಾರು ನಾಯಕರು ಸಭೆಯಲ್ಲಿ ಹಾಜರಿದ್ದಾರೆ. ಕರ್ನಾಟಕದ ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದಾರೆ.

Rahul gandhi,CWC Meeting,Congress leaders

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ