ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಜಗನ್ ಮೋಹನ್ ರೆಡ್ದಿ

ಹೈದರಾಬಾದ್‌: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ನ ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ ಇಂದು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಅಮರಾವತಿಯಲ್ಲಿ ನಡೆದ ನೂತನ ಶಾಸಕರೊಂದಿಗಿನ ಪಕ್ಷದ ಶಾಸಕಾಂಗ ಸಭೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಜಗನ್‌ ಮೋಹನ್‌ ರೆಡ್ಡಿಯನ್ನು ಆಯ್ಕೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಜಗನ್ ರೆಡ್ಡಿ, ತಮ್ಮನ್ನು ಆಯ್ಕೆ ಮಾಡಿದ ಶಾಸಕರಿಗೆ ಧನ್ಯವಾದ ಅರ್ಪಿಸುತ್ತ, 2019ರಲ್ಲಿ ಜನರು ನಮ್ಮ ಮೇಲೆ ವಿಶ್ವಾಸ ಮತ್ತು ನಂಬಿಕೆಯನ್ನಿಟ್ಟು ಮತ ನೀಡಿದ್ದಾರೆ, ನಮ್ಮ ಕಾರ್ಯಕ್ಷಮತೆಯನ್ನು ನೋಡಿ 2024ಕ್ಕೂ ಜನರು ಇಂತದ್ದೇ ದೊಡ್ಡ ತೀರ್ಪನ್ನು ನೀಡಬೇಕು. ಒಂದು ವರ್ಷದೊಳಗೆ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮ್ಮೆಲ್ಲರ ಸಹಕಾರ ಬೇಕು ಎಂದು ಕೇಳಿದರು.

ಇದೇ ವೇಳೆ ಜಗನ್ ಮೋಹನ್‌ ರೆಡ್ಡಿ ಅವರು ನೂತನ ಸರ್ಕಾರ ರಚನೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲ ಇ.ವಿ.ಎಲ್‌. ನರಸಿಂಹನ್‌ ಅವರನ್ನು ಇಂದೇ ಮನವಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 30ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆಯಿದೆ.

Andrapradesh election,Jagan Mohan Reddy,YSRCLP leader,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ