ಜೂ.1ರಂದು ನೆಲಮಂಗಲ ಪುರಸಭೆ ಚುನಾವಣೆ

ಬೆಂಗಳೂರು, ಮೇ 25- ಕರ್ನಾಟಕ ಚುನಾವಣಾ ಆಯೋಗದ ಆದೇಶದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪುರಸಭೆ ಚುನಾವಣೆಯು ಜೂ.1ರಂದು ನಡೆಯಲಿದ್ದು, ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ. ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡತೆ ಅಂದು ಸಾರ್ವತ್ರಿಕ ರಜೆ ಘೋಷಿಸಿಲಾಗಿದೆ.

ಈ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ರಾಜ್ಯಪಾಲರು ಆದೇಶಿಸಿದ್ದಾರೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡುವುದು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗುತ್ತಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ